ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು

August 28, 2020

ಬೆಂಗಳೂರು ಆ.28 : ಬೆಂಗಳೂರಿನ ಆನಂದ್ ರಾವ್ ಸರ್ಕಲ್ ನ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಲಾಗಿದೆ. ಬಸ್ಸು ನಿಲ್ದಾಣ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು ಮೇಲ್ಸೇತುವೆಗೆ ರಾಯಣ್ಣ ಹೆಸರು ನಾಮಕರಣ ಮಾಡಿದ್ದೇವೆ ಸ್ವಾತಂತ್ರ್ಯ ದಿನದಂದೇ ಹುಟ್ಟಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡದ ಕಲಿ. ಕಿತ್ತೂರು ರಾಣಿ ಚೆನ್ನಮ್ಮ ಅವರ ಬಲಗೈ ಬಂಟರಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಕೊನೆಯ ಉಸಿರು ಇರುವವರೆಗೂ ಹೋರಾಟ ನಡೆಸಿದವರು. ರಾಯಣ್ಣ ನಮ್ಮ ಯುವ ಜನತೆಗೆ ಅತ್ಯುತ್ತಮ ಸ್ಫೂರ್ತಿಯಾಗಲಿ. ಇಂತಹ ಮಹಾನ್ ವ್ಯಕ್ತಿಯ ಹೆಸರು ಮೇಲ್ಸೇತುವೆ ಇಟ್ಟಿರುವುದು ಔಚಿತ್ಯಪೂರ್ಣವಾಗಿದೆ ಎಂದರು.