ದಾಖಲೆಯ 9,386 ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು ಆ.28 : ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು ಒಂದೇ ದಿನ ದಾಖಲೆಯ 9,386 ಪ್ರಕರಣ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3.9 ಲಕ್ಷ ಗಡಿ ದಾಟಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 141 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,232ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾ 9,386 ಮಂದಿ ತುತ್ತಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,09,792ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು 7,866 ಮಂದಿ ಡಿಸ್ಚಾರ್ಜ್ ಆಗಿದ್ದು 2,19,554 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇನ್ನು 84,987 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 3,357 ಪ್ರಕರಣ ಪತ್ತೆಯಾಗಿದ್ದು 59 ಮಂದಿ ಮೃತಪಟ್ಟಿದ್ದಾರೆ. ಇನ್ನು ಇಂದು 3,362 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
