ಕುಶಾಲನಗರದಲ್ಲಿ ಡ್ರಗ್ಸ್ ಪ್ರಕರಣ : ಮೂವರು ಪರಾರಿ : ಕಾರು ವಶ

28/08/2020

ಮಡಿಕೇರಿ ಆ.28 : ಬೆಂಗಳೂರಲ್ಲಿ ಡ್ರಗ್ಸ್ ಜಾಲ ಪತ್ತೆಯಾದ ಬೆನ್ನಲ್ಲೇ ಕೊಡಗಿನ ಕುಶಾಲನಗರದಲ್ಲೂ ಡ್ರಗ್ಸ್ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಕುಶಾಲನಗರದಲ್ಲಿ ಪೊಲೀಸರು ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಸಂದರ್ಭ ಅಪರಿಚಿತ ಎರಡು ವಾಹನಗಳಲ್ಲಿದ್ದ ಸಂಶಯಾಸ್ಪದ ಓರ್ವ ಮಹಿಳೆ ಸೇರಿದಂತೆ ಮೂವರು ವ್ಯಕ್ತಿಗಳು ಒಂದು ವಾಹನವನ್ನು ಬಿಟ್ಟು ಮತ್ತೊಂದು ವಾಹನದಲ್ಲಿ ಪರಾರಿಯಾಗಿರುವ ಬಗ್ಗೆ ಮಾಹಿತಿ ದೊರೆತ್ತಿದೆ. ಬಿಟ್ಟು ಹೋಗಿರುವ ಕಾರಿನಲ್ಲಿ ಅಲ್ಪ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣವನ್ನು ಅಪರಾಧ ಪತ್ತೆ ದಳಕ್ಕೆ ವಹಿಸಲಾಗಿದ್ದು, ಪರಾರಿಯಾಗಿರುವ ಮೂವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.