ಕೊಡಗಿನ ನ್ಯಾಯಾಲಯಗಳಲ್ಲಿ 11,079 ಕ್ರಿಮಿನಲ್ ಪ್ರಕರಣಗಳು ಬಾಕಿ

August 28, 2020

ಮಡಿಕೇರಿ ಆ.28 : ಕೊಡಗು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 4,701 ಸಿವಿಲ್ ಪ್ರಕರಣಗಳು ಹಾಗೂ 11,079 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15,780 ಪ್ರಕರಣಗಳು ಬಾಕಿ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ನೂರುನ್ನೀಸ ಅವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಕರಣಗಳ ಪೈಕಿ ಮೆಗಾ ಇ-ಲೋಕ ಅದಾಲತ್ ಮುಖೇನ ಹಲವು ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ನೂರುನ್ನೀಸ ಅವರು ಮನವಿ ಮಾಡಿದರು.

error: Content is protected !!