ಕಾವೇರಿ ನಿಸರ್ಗಧಾಮಕ್ಕೆ ಸೆ.1 ರಿಂದ ಪ್ರವೇಶಕ್ಕೆ ಅವಕಾಶ

28/08/2020

ಮಡಿಕೇರಿ ಆ.28 : ಕೋವಿಡ್ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಕಾವೇರಿ ನಿಸರ್ಗಧಾಮ ಪ್ರವಾಸಿ ಕೇಂದ್ರ ಸೆ.1 ರಿಂದ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ದೊರೆಯಲಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದ್ದ ಕಾವೇರಿ ನಿಸರ್ಗಧಾಮ ಕೆಲವು ನಿಬಂಧನೆಗಳೊಂದಿಗೆ ಇದೀಗ ಮತ್ತೆ ಪ್ರವೇಶಕ್ಕೆ ಅವಕಾಶ ನೀಡಲು ಸರಕಾರ ಆದೇಶ ಹೊರಡಿಸಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ತಿಳಿಸಿದ್ದಾರೆ.
ದುಬಾರೆ ಸಾಕಾನೆ ಶಿಬಿರ ಸೆ.15 ರಿಂದ ಪ್ರವಾಸಿಗರಿಗೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.