ಕೋವಿಡ್ ಗೆ ಮಡಿಕೇರಿ ನಗರದ ಗಣಪತಿ ಬೀದಿ ನಿವಾಸಿ ಬಲಿ : ಕೊಡಗಿನಲ್ಲಿ ಸಾವಿನ ಸಂಖ್ಯೆ 19 ಕ್ಕೆ ಏರಿಕೆ

28/08/2020

ದಿನಾಂಕ:28-08-2020 
ಕೊಡಗು ಜಿಲ್ಲೆಯಲ್ಲಿ ಈ ದಿನ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಪ್ರಕರಣಗಳ ಒಟ್ಟು ಸಂಖ್ಯೆ 19 ಕ್ಕೇರಿದೆ.  ವಿವರ ಕೆಳಕಂಡಂತಿದೆ. 
ಮಡಿಕೇರಿ ನಗರದ ಗಣಪತಿ ಬೀದಿ ನಿವಾಸಿ 53 ವರ್ಷದ ಪುರುಷರೊಬ್ಬರು ಹಿಂದಿನಿಂದಲೂ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಇವರು ವಾಸಿಸುತ್ತಿದ್ದ ಪ್ರದೇಶವು ನಿಯಂತ್ರಿತ ಪ್ರದೇಶದಲ್ಲಿ ಬಂದಿದ್ದರಿಂದ ದಿನಾಂಕ:24-08-2020 ರಂದು ಇವರಿಗೆ ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. 
ದಿನಾಂಕ:25-08-2020 ರಂದು ಇವರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು, ಇವರು ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಆದರೆ ಇಂದು (28-08-2020) ರಾತ್ರಿ 07.10 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.  

ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು. 
ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ.