ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದು ಸಲಹೆ

August 29, 2020

ಬೆಂಗಳೂರು ಆ.29 : ರಾಜ್ಯ ಸರ್ಕಾರದ ಕೇಂದ್ರದಿಂದ ಜಿಎಸ್ ಟಿ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು. ಯಾವುದೇ ಕಾರಣಕ್ಕೂ ಸಾಲ ಪಡೆಯುವ ತೀರ್ಮಾನ ತೆಗೆತುಕೊಳ್ಳುವುದು ಬೇಡ ಎಂದು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ಸಂಕಷ್ಟದ ನಡುವೆಯು ರಾಜ್ಯ ಸರ್ಕಾರ ಶೇ.71.61 ರಷ್ಟು ಜಿಎಸ್ ಟಿ ಸಂಗ್ರಹ ಮಾಡಿದೆ. ಆದರೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ರೂ.13,764 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಜಿಎಸ್ ಟಿ ಪರಿಹಾರ ಜನವರಿಯವರೆಗೆ ಇದು ರೂ.27,000 ಕೋಟಿ ರೂ.ಗೆ ಏರಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಕೇಂದ್ರವು 15ನೇ ಹಣಕಾಸು ಆಯೋಗದ ವರದಿಯಲ್ಲೂ ರಾಜ್ಯಕ್ಕೆ ಭೀಕರ ತಾರತಮ್ಯ ಮಾಡಿದೆ. ಈಗ ಜಿಎಸ್ ಟಿಯಲ್ಲೂ ದ್ರೋಹ ಮಾಡುತ್ತಿದೆ ಎಂದು ಟೀಕಿಸಿದರು.