ಶಿಕ್ಷಕ ಮಿತ್ರ ಆಪ್ ಬಿಡುಗಡೆ

August 29, 2020

ಬೆಂಗಳೂರು ಆ.29 : ಶಿಕ್ಷಕರ ಅನುಕೂಲಕ್ಕಾಗಿ ಅಭಿವೃದ್ಧಿ ಪಡಿಸಿರುವ ಶಿಕ್ಷಕ ಮಿತ್ರ ಆಪ್ ನ್ನು ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದರು.
ರಾಜ್ಯದಲ್ಲಿ ಸುಮಾರು 2.50 ಲಕ್ಷ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಶಿಕ್ಷಕರ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆ ಹರಿಸಲು ಆಪ್ ಅಭಿವೃದ್ಧಿ ಪಡಿಸಲಾಗಿದೆ.ಇದೇ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬರೆದ ವಿದ್ಯಾ ವಿನೀತ ಪುಸ್ತಕ ವನ್ನೂ ಮುಖ್ಯಮಂತ್ರಿ ಬಿಡುಗಡೆ ಮಾಡಿದರು.
ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸಕ್ತ ಹಾಗೂ ಆಪ್ ಲೋಕಾರ್ಪಣೆ ಬಳಿಕ ಮಾತನಾಡಿದ ಯಡಿಯೂರಪ್ಪ, ಆಪ್ ಮೂಲಕ ಶಿಕ್ಷಕರು ತಮ್ಮ ಸೇವಾ ವಿಷಯ ಹಾಗೂ ಸಮಸ್ಯೆಗಳನ್ನು ಬಗೆಹರಿಸಬಹುದು.ಇದರಿಂದ ಶಿಕ್ಷಕರ ಅಲೆದಾಟ ಮುಗಿಯಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನೂ ಆಪ್ ಮೂಲಕ ಮಾಡಲಾಗುತ್ತದೆ ಎಂದು ತಿಳಿಸಿದರು.

error: Content is protected !!