ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

29/08/2020

ಮಡಿಕೇರಿ ಆ.29 : ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ಮೂಲನಿವಾಸಿ ಜನಾಂಗದವರ ಅಭಿವೃದ್ಧಿ ಯೋಜನೆಯಡಿ ಪಶು ಸಂಗೋಪನಾ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಸು, ಹಂದಿ, ಕೋಳಿ, ಕುರಿ, ಆಡು ಇತ್ಯಾದಿ ಸಾಕಾಣಿಕೆಗೆ ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಪರಿಶಿಷ್ಟ ಪಂಗಡದ ಜೇನುಕುರುಬ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261 ಮತ್ತು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ಅವರು ತಿಳಿಸಿದ್ದಾರೆ.