ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕ ಅದಾಲತ್ : ಸೋಮವಾರಪೇಟೆಯಲ್ಲಿ ಸಭೆ

29/08/2020

ಸೋಮವಾರಪೇಟೆ ಆ.29 : ರಾಷ್ಟ್ರದಾದ್ಯಂತ ಸೆ.19ರಂದು ಮೆಗಾ ಇ ಲೋಕ ಅದಾಲತ್ ನಡೆಯಲಿದ್ದು, ಈ ದಿನದಂದು ಇತ್ಯರ್ಥಪಡಿಸಿಕೊಳ್ಳಲು ಸಾಧ್ಯವಿರುವಂತಹ ಎಲ್ಲಾ ದಾವೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಆರ್. ದಿಂಡಲಕೊಪ್ಪ ಹೇಳಿದರು.
ಸೋಮವಾರಪೇಟೆ ಪಟ್ಟಣದಲ್ಲಿನ ನ್ಯಾಯಾಲಯದ ಕಲಾಪ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಆತಂಕದ ಹಿನ್ನೆಲೆ ಲೋಕ ಅದಾಲತ್‍ನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗುವುದು ಎಂದರು.
ಸಭೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ತಹಸೀಲ್ದಾರ್ ಗೋವಿಂದರಾಜು, ವೃತ್ತ ನಿರೀಕ್ಷಕ ನಂಜುಂಡೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು, ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ, ಹಿರಿಯ ಕಾರ್ಮಿಕ ಅಧಿಕಾರಿ ಲೀನಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನಿಲ್‍ಕುಮಾರ್, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್, ಠಾಣಾಧಿಕಾರಿಗಳಾದ ಶಿವಶಂಕರ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.