ಜನರಲ್ ತಿಮ್ಮಯ್ಯ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಲು ಚಿಂತನೆ

01/09/2020

ಮಡಿಕೇರಿ. ಸೆ. 1: ಮಡಿಕೇರಿ ನಗರದಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಅಭಿವೃದ್ಧಿ ಕಾರ್ಯದ ನೇತೃತ್ವ ವಹಿಸಿರುವ ನಿವೃತ್ತ ಮೇಜರ್ ಬಿ.ಎ.ನಂಜಪ್ಪ ಅವರು ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರನ್ನು ಭೇಟಿಯಾಗಿ ತಿಮ್ಮಯ್ಯ ಸ್ಮಾರಕ ಭವನದ ಪ್ರಗತಿಯ ಕುರಿತು ವಿವರಿಸಿದರು. ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸುವ ಬಗ್ಗೆಯೂ ಚರ್ಚೆ ನಡೆಸಿದರು.