ನಗರಸಭೆಯಲ್ಲಿ ಅವ್ಯವಹಾರ ನಡೆದಿದೆ : ನಂದಕುಮಾರ್ ಆರೋಪ

September 1, 2020

ಮಡಿಕೇರಿ ಸೆ.1 : ಮಡಿಕೇರಿ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಆಗದೆ ಇರುವ ಕಾಮಗಾರಿಗಳಿಗೆ ಕೂಡ ಬಿಲ್ ಪಾಸ್ ಮಾಡಲಾಗಿದೆ ಎಂದು ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಆರೋಪಿಸಿದ್ದಾರೆ. ಅವ್ಯವಹಾರ ನಡೆದಿರುವ ಬಗ್ಗೆ ಶಂಕೆ ಇದ್ದು, ಎಸಿಬಿಗೆ ದೂರು ನೀಡುವುದಾಗಿ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ನಗರಸಭೆಗೆ 35 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಸದ್ಬಳಕೆ ಮಾಡಿಕೊಂಡಿಲ್ಲವೆಂದು ಟೀಕಿಸಿದರು.