ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣವೇ ಬರುತ್ತಿಲ್ಲ

01/09/2020

ಮಡಿಕೇರಿ ಸೆ.1 : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗೆ ಅನುದಾನವೇ ಬಿಡುಗಡೆಯಾಗುತ್ತಿಲ್ಲವೆಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್ ಅವರು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾದಿಭಾಗ್ಯದ ಅನೇಕ ಅರ್ಜಿಗಳು ಬಾಕಿ ಉಳಿದಿದ್ದು, ಅನುದಾನವೇ ಬಿಡುಗಡೆಯಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರ ಕಡೆಗಣನೆ ಸರಿಯಲ್ಲವೆಂದು ಅವರು ಹೇಳಿದ್ದಾರೆ.