ಮಡಿಕೇರಿಯಲ್ಲಿ ಪಾಸಿಟಿವ್ ಮೈಸೂರಿನಲ್ಲಿ ನೆಗೆಟಿವ್ !

September 1, 2020

ಮಡಿಕೇರಿ ಸೆ.1 : ಕೋವಿಡ್ ಪ್ರಕರಣಗಳಲ್ಲಿ ಅನೇಕ ಗೊಂದಲಗಳಿದ್ದು, ಕೆಪಿಸಿಸಿಯ ಹಿರಿಯ ಉಪಾಧ್ಯಕ್ಷ ಮಿಟ್ಟುಚಂಗಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಎಂದು ಮಡಿಕೇರಿ ಆಸ್ಪತ್ರೆಯಲ್ಲಿ ವರದಿ ನೀಡಲಾಗಿತ್ತು. ಆದರೆ ಮೈಸೂರಿನಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಎಂಎಲ್ ಸಿ ವೀಣಾಅಚ್ಚಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ವ್ಯಾಪಿಸುವುದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ ಎಂದು ಆರೋಪಿಸಿದರು.

error: Content is protected !!