ಮಡಿಕೇರಿಯಲ್ಲಿ ಸರಳವಾಗಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ
02/09/2020

ಮಡಿಕೇರಿ ಸೆ.2 : ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ದೀಪ ಬೆಳಗಿಸಿ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಮಣಜೂರು ಮಂಜುನಾಥ್ ಇತರರು ಹಾಜರಿದ್ದರು.