ಮಳೆ ಹೆಚ್ಚಾಗುವ ಸಾಧ್ಯತೆ : ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

02/09/2020

ಮಡಿಕೇರಿ ಸೆ.2 : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೆ.4ರ ಬೆಳಗ್ಗೆ 8.30 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸರಾಸರಿ 115.6 ಮಿ.ಮೀ. ನಿಂದ 204.4 ಮಿ.ಮೀ. ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯಿಂದ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಸಾರ್ವಜನಿಕರು ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 08272-221077, ವಾಟ್ಸ್‍ಅಪ್ ಸಂಖ್ಯೆ-8550001077 ಮೂಲಕ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.