ಮಡಿಕೇರಿ ತಾಲ್ಲೂಕಿಗೆ 107 ಇಂಚು ಮಳೆ
02/09/2020

ಮಡಿಕೇರಿ ಸೆ.2 : ಮಡಿಕೇರಿ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಮಳೆಯ ಪ್ರಮಾಣ ಹೆಚ್ಚಾಗಿದೆ. ಜನವರಿಯಿಂದ ಇಲ್ಲಿಯವರೆಗೆ ತಾಲ್ಲೂಕಿನಲ್ಲಿ 107 ಇಂಚು ಮಳೆಯಾಗಿದ್ದು, ಕಳೆದ ವರ್ಷ ಕೂಡ ಇದೇ ಅವಧಿಯಲ್ಲಿ ಇಷ್ಟೇ ಪ್ರಮಾಣದ ಮಳೆಯಾಗಿರುವುದು ವಿಶೇಷ. ವಿರಾಜಪೇಟೆ ತಾಲ್ಲೂಕಿನಲ್ಲಿ 70 ಇಂಚು ಮಳೆಯಾಗಿದ್ದು, ಕಳೆದ ವರ್ಷ 83 ಇಂಚು ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ 50 ಇಂಚು ಮಳೆಯಾಗಿದ್ದು, ಕಳೆದ ವರ್ಷ 56 ಇಂಚು ಮಳೆಯಾಗಿತ್ತು.