ಗಲಭೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿಯೆಂದ ಸಿದ್ದು

03/09/2020

ಬೆಂಗಳೂರು ಸೆ.3 : ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಗಲಭೆ ನಡೆದಿದ್ದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಪ್ರಕರಣದ ಮಾಹಿತಿ ಕಲೆಹಾಕಿದರು. ಈ ವೇಳೆ ಸಂಪೂರ್ಣ ಪ್ರಕರಣದ ಪೂರ್ವಾಪರ ಪರಿಶೀಲಿಸಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಸಿಹಿದರು.
ಅಂತೆಯೇ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೆÇಲೀಸ್ ಠಾಣೆಗೆ ಭೇಟಿನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡೆ. ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್, ನಸೀರ್ ಅಹ್ಮದ್, ವೆಂಕಟರಮಣಪ್ಪ ಅವರು ಸೇರಿದಂತೆ ಹಲವರು ಜೊತೆಗಿದ್ದರು.