ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

September 3, 2020

ಮಡಿಕೇರಿ ಸೆ.03 :-2019-20ನೇ ಸಾಲಿನ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಇಲಾಖಾ ವೆಬ್‌ಸೈಟ್ನ www.sw.kar.nic.in ಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, ೩೦ ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣೆಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‌ನಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ ಮೂರು ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.೬೦ ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಡಿ.ಬಿ.ಟಿ. ಮೂಲಕ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು.
ಸಲ್ಲಿಸಬೇಕಾದ ದಾಖಲಾತಿಗಳು: ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿ. ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.