ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ
03/09/2020

ಮಡಿಕೇರಿ ಸೆ. 03 : ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಭತ್ತದ ಬೆಳೆ ಸ್ಪರ್ಧೆಯನ್ನು ತಾಲ್ಲೂಕು, ಜಿಲ್ಲಾ, ರಾಜ್ಯಮಟ್ಟದಲ್ಲಿ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಮಡಿಕೇರಿ ತಾಲ್ಲೂಕಿನ ರೈತರು ಸೆಪ್ಟೆಂಬರ್, 15 ರೊಳಗೆ ಸ್ಥಳೀಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಹೆಸರು ನೋಂದಾಯಿಸಬಹುದು. ವಿವಿಧ ಹಂತದ ಬೆಳೆ ಸ್ಪರ್ಧೆಗೆ ಭಾಗವಹಿಸುವ ಸಾಮಾನ್ಯ ರೈತರು 100 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರು ರೂ.೨೫ ಪ್ರವೇಶ ಶುಲ್ಕವನ್ನು ಸಂದಾಯ ಮಾಡಬೇಕು.
ಹೆಚ್ಚಿನ ಮಾಹಿತಿಗೆ ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಮಡಿಕೇರಿ, ಭಾಗಮಂಡಲ, ನಾಪೋಕ್ಲು, ಸಂಪಾಜೆ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಮಡಿಕೇರಿ ತಾಲ್ಲೂಕು ಇವರನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
