ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ಕೆ.ಇ.ಮ್ಯಾಥ್ಯು ಆಯ್ಕೆ

03/09/2020

ಮಡಿಕೇರಿ ಸೆ.3 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ಕೆ.ಇ.ಮ್ಯಾಥ್ಯು ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಎಸ್.ಎಸ್.ಪ್ರಕಾಶಮ್ ಅವರು ಆದೇಶ ಪತ್ರವನ್ನು ಹಸ್ತಾಂತರಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ತಿಳಿಸಿದರು.
ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಡಿಸಿಸಿ ಮಾಜಿ ಸದಸ್ಯ ಸುನೀಲ್ ಸುಬ್ಬಪ್ಪ ಹಾಗೂ ಕಾಂಗ್ರೆಸ್ ಪ್ರಮುಖ ಕಡ್ಲೆರ ಗಣೇಶ್ ಹಾಜರಿದ್ದರು.
ಕೆ.ಇ.ಮ್ಯಾಥ್ಯು ಅವರು 1986 ರಿಂದಲೇ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. 1988-89ರ ವರೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮೊದಲನೇ ವರ್ಷ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ದ್ವಿತೀಯ ವರ್ಷದಲ್ಲಿ ಕಾರ್ಯದರ್ಶಿ, 1989-1991ರ ವರೆಗೆ ಎನ್‌ಎಸ್‌ಯುಐ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ, ಮಡಿಕೇರಿ ನಗರ ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, 1991-1994ರ ವರೆಗೆ ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದಾರೆ.
1994-1996 ರ ವರೆಗೆ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, 1996 ರಿಂದ 2000ರ ವರೆಗೆ ಉಪಾಧ್ಯಕ್ಷ, 2000-2004ರ ವರೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, 2004-2010 ರವರೆಗೆ ಮಡಿಕೇರಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ, 2011-2019ರ ವರೆಗೆ ಡಿಸಿಸಿ ಕಾರ್ಯಕಾರಿ ಸಮಿತಿಯ ಸದಸ್ಯ, 2014-2020 ಮಾರ್ಚ್‌ವರೆಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಅಲ್ಲದೆ ಆತ್ಮೀಯ ಗೆಳೆಯರ ಬಳಗದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ, ಮಡಿಕೇರಿ ದಸರಾ ಸಮಿತಿಯ ಜಂಟಿ ಕಾರ್ಯದರ್ಶಿ, ಕಾರ್ಯದರ್ಶಿ, ಕುಂದೂರು ಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕೋದಂಡ ರಾಮ ದಸರಾ ಸಮಿತಿಯ ಗೌರವ ಅಧ್ಯಕ್ಷರಾಗಿ, ಓಂಕಾರ ಕಲಾ ವೇದಿಕೆಯ ಸಲಹಾ ಸಮಿತಿಯ ಸದಸ್ಯ, ಕೊಡಗು ಜಿಲ್ಲಾ ಕ್ರಿಶ್ಚಿಯನ್ ವೆಲ್‌ಫೇರ್ ಅಸೋಶಿಯೇಷನ್‌ನ ಸ್ಥಾಪಕ ನಿರ್ದೇಶಕ, ಕೊಡಗು ಜಿಲ್ಲಾ ಕ್ರಿಶ್ಚಿಯನ್ ಸ್ಟುಡೆಂಟ್ ಯೂನಿಯನ್‌ನ ಅಧ್ಯಕ್ಷ, ಮಡಿಕೇರಿ ಜನೋತ್ಸವ ದಸರಾ ಸಮಿತಿಯ ಉಪಾಧ್ಯಕ್ಷ, ಗೌರವ ಅಧ್ಯಕ್ಷರಾಗಿ ಮ್ಯಾಥ್ಯು ಕಾರ್ಯನಿರ್ವಹಿಸಿದ್ದಾರೆ.