ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ನೆರವು
04/09/2020

ಮಡಿಕೇರಿ ಸೆ.4 : ರೋಟರಿ ಮಿಸ್ಟಿ ವತಿಯಿಂದ ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಪ್ರಯೋಗಾಲಯ ಸಿಬ್ಬಂದಿಗೆ ಅಗತ್ಯವಾದ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ಸಹಾಯವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮೂಲಕ ಶುಕ್ರವಾರ ನೀಡಲಾಯಿತು.
ಆರೋಗ್ಯ ಇಲಾಖೆಯ ಸಿಬ್ಬಂದಿ ನಿಶಿ ಎಂಬುವವರಿಗೆ ಥೈರಾಯ್ಡ್ ಶಸ್ತ್ರಚಿಕಿತ್ಸೆಗಾಗಿ ಅಗತ್ಯವಿದ್ದ 60 ಸಾವಿರ ರೂ.ಗಳಷ್ಟು ಆರ್ಥಿಕ ಅಗತ್ಯ ಮನಗಂಡು ಈ ನಿಟ್ಟಿನಲ್ಲಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‍ನಿಂದ ನಿಶಿ ಅವರಿಗೆ 20 ಸಾವಿರ ರೂ. ಧನ ಸಹಾಯವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮೂಲಕ ಹಸ್ತಾಂತರಿಸಲಾಯಿತು.
ರೋಟರಿ ಮಿಸ್ಟಿ ಹಿಲ್ಸ್‍ನ ನೆರವಿನ ಕೊಡುಗೆಗೆ ಜಿಲ್ಲಾಧಿಕಾರಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಿಸ್ಟಿ ಹಿಲ್ಸ್‍ನ ಅಧ್ಯಕ್ಷರಾದ ಪಿ.ಸಂದೀಪ್, ಕಾರ್ಯದರ್ಶಿ ಸತೀಶ್ ಸೋಮಣ್ಣ, ನಿರ್ದೇಶಕರಾದ ಎಂ.ಪಿ.ನಾಗರಾಜ್, ಸವಿತಾ, ಅರುಣ್ ಇತರರು ಹಾಜರಿದ್ದರು.