ಡ್ರಗ್ಸ್ ಜಾಲದ ರಾಗಿಣಿ ಬಂಧನ

05/09/2020

ಬೆಂಗಳೂರು ಸೆ.5 : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಇಂದು ಬೆಳಗ್ಗೆ ನಟಿ ರಾಗಿಣಿಯನ್ನು ವಿಚಾರಣೆಗೆ ಕರೆತಂದಿದ್ದ ಸಿಸಿಬಿ ಅಧಿಕಾರಿಗಳು, ಸುಮಾರು ಏಳು ಗಂಟೆಗಳ ಸತತ ವಿಚಾರಣೆ ಬಳಿಕ ನಟಿಯನ್ನು ವಶಕ್ಕೆ ಪಡೆದಿದ್ದಾರೆ.
ಡ್ರಗ್ಸ್ ಸೇವನೆ ಮತ್ತು ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿದೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಗಿಣಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಟಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ರಾಗಿಣಿಯನ್ನು ಬಂಧಿಸಿದ್ದಾರೆ.
ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಾಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.