ಶಿಕ್ಷಕರ ದಿನಾಚರಣೆ : ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಶ್ಲಾಘನೆ

05/09/2020

ಮಡಿಕೇರಿ ಸೆ.5 : ಉತ್ತಮ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದದ್ದು. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಉತ್ತಮಗೊಳಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಮೈಕಲರ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಕೊಡಗು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ 4-5 ವರ್ಷಗಳಿಂದಲೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ಶಿಕ್ಷಕರೊಂದಿಗೆ ಸಮಯ ಕಳೆಯುವುದು ಸಂತಸದ ವಿಷಯ. ಒಬ್ಬ ಜಿಲ್ಲಾಧಿಕಾರಿಯಾಗಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಬಹು ಮುಖ್ಯವಾದವು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಲುವಾಗಿ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ. ಅಂತಹ ಶಿಕ್ಷಕರಿಗೆ ಅಭಿನಂದನೆಗಳು. ಶಿಕ್ಷಣವನ್ನು ಮತ್ತಷ್ಟು ಉತ್ತಮ ಮತ್ತು ಪರಿಣಾಮಕಾರಿಯಾಗಿಸುವಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದರು.
ಶಾಲಾ ಹಂತದಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಮತ್ತು ವಿಚಾರಗಳು ಮಕ್ಕಳಲ್ಲಿ ಆಳವಾಗಿ ಬೇರೂರುತ್ತದೆ. ಈ ನಿಟ್ಟಿನಲ್ಲಿ ಮತ್ತಷ್ಟು ಉತ್ತಮ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಜಿಲ್ಲೆಯಲ್ಲಿ ಬಹುದೂರದವರೆಗೆ ಶಿಕ್ಷಕರು ಕಾಲ್ನಡಿಗೆಯಲ್ಲಿ ತೆರಳಿ ಪಾಠ ಮಾಡುತ್ತಾರೆ. ಕೆಲವು ಕಡೆ ವಿದ್ಯುತ್ ಸಮಸ್ಯೆಯಿದ್ದರೂ ಅವೆಲ್ಲವನ್ನೂ ಮೀರಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವೇಳೆ ತಮ್ಮ ಶಾಲಾ ಶಿಕ್ಷಣದ ದಿನಗಳನ್ನು ಸ್ಮರಿಸಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಾವು ಬಾಲ್ಯದಲ್ಲಿ ಓದಿದ ಶಾಲೆ ಮತ್ತು ಅಲ್ಲಿನ ಪ್ರಾಂಶುಪಾಲರು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.
ಮಡಿಕೇರಿ ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಅವರು ಮಾತನಾಡಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಅಲ್ಲದೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದವರಿಗೆ ಅಭಿನಂದನೆ ಸಲ್ಲಿಸಿದರು.
ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವು ಹಿರಿದು. ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರ ಸೇವಾ ಕಾರ್ಯವನ್ನು ಯಾರು ಮರೆಯುವಂತಿಲ್ಲ ಎಂದು ತೆಕ್ಕಡೆ ಶೋಭಾ ಮೋಹನ್ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ ಅವರು, ಜಿಲ್ಲೆಯ ಗಾಳಿ ಮಳೆಯನ್ನು ಲೆಕ್ಕಿಸದೆ ಮಕ್ಕಳ ಭವಿಷ್ಯ ರೂಪಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸುತ್ತಾರೆ. ನಿವೃತ್ತ ಶಿಕ್ಷಕರು ಸಹ ತಮ್ಮ ಸೇವಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು.
ಅಲ್ಲದೆ ಜಿಲ್ಲೆಯ ಶಿಕ್ಷಕರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಸೇವಾ ಪ್ರಶಸ್ತಿ ದೊರೆಯುವಂತಾಗಲಿ ಎಂದು ಅಪ್ಪಂಡೇರಂಡ ಭವ್ಯ ಅವರು ಶುಭಹಾರೈಸಿದರು.
ಮಡಿಕೇರಿ ತಾ.ಪಂ.ಇಒ ಲಕ್ಷ್ಮೀ ಅವರು ಮಾತನಾಡಿ ಶಿಕ್ಷಕರಿಗೆ ಶುಭಾಶಯ ಸಲ್ಲಿಸಿದರು. ಅಲ್ಲದೆ ಶಿಕ್ಷಕರು ಸರ್ವರಿಂದಲೂ ಪೂಜ್ಯನೀಯರು ಮತ್ತು ವಂದನೀಯರು ಎಂದು ಅವರು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್, ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಅವರು ಮಾತನಾಡಿದರು. ಮಡಿಕೇರಿ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಅವರು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದರು.
ಈ ಸಂದರ್ಭ ಜಿಲ್ಲೆಯ 9 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ನಿವೃತ್ತರಾದ ಶಿಕ್ಷಕರಿಗೂ ಸಹ ಶಾಲು ಫಲ ತಾಂಬೂಲ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕು ಮೊದಲು ಇತ್ತೀಚೆಗ ನಿಧನರಾದ ಮಾಜಿ ರಾಷ್ಟ್ರಪತಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕøತ ಪ್ರಣಬ್ ಮುಖರ್ಜಿ ಮತ್ತು ಕೊಡಗಿನ ಪ್ರಾಕೃತಿಕ ವಿಕೋಪದಲ್ಲಿ ನಿಧನರಾದವರಿಗೆ ಸಂತಾಪ ಸೂಚಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ರವಿ, ಮಡಿಕೇರಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ, ಜಿಲ್ಲಾ ಅನುದಾನಿತ ಪ್ರೌಢ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ವಿಲ್ಫ್ರೆಡ್ ಕ್ರಾಸ್ತ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಕುಮಾರ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಿಮ್ಮಿ ಸಿಕ್ವೆರಾ, ಕರ್ನಾಟಕ ರಾಜ್ಯ ಎಸ್‍ಸಿ-ಎಸ್‍ಟಿ ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಸಿ.ರಾಜು, ರೆವರೆಂಡ್ ಫಾದರ್ ನವೀನ್ ಇತರರು ಹಾಜರಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪಿ.ಎಸ್. ಮಚ್ಚಾಡೋ ಅವರು ಸ್ವಾಗತಿಸಿದರು, ಲಹರಿ ಶಿಕ್ಷಕರ ಕಲಾ ಬಳಗದವರು ನಾಡಗೀತೆ, ರಾಷ್ಟ್ರಗೀತೆ ಹಾಡಿದರು. ಅನಿತಾ ಎಸ್.ಡಿ ಮತ್ತು ರಂಜಿತ್ ಅವರು ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ವಂದಿಸಿದರು.