ಸೆ.19 ರಂದು ತಾಂತ್ರಿಕ ಮೆಗಾ ಲೋಕ ಅದಾಲತ್

05/09/2020

ಮಡಿಕೇರಿ ಸೆ.5 : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್, 19 ರಂದು ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿಯಿರುವ ರಾಜಿಯಾಗುವಂತಹ ಎಲ್ಲಾ ಪ್ರಕರಣಗಳನ್ನು ತಾಂತ್ರಿಕ ಲೋಕ ಅದಾಲತ್(ಇ-ಲೋಕ ಅದಾಲತ್)ನ ಮೂಲಕ ಇತ್ಯರ್ಥ ಪಡಿಸಲಾಗುವುದು.
ಆಸಕ್ತರು ಸೆ.18 ರ ಮುಂಚಿತವಾಗಿ ತಮ್ಮ ವಕೀಲರನ್ನು ಸಂಪರ್ಕಿಸಿ ಪ್ರತಿ ದಿನ ನಡೆಯುವ ಲೋಕ ಅದಾಲತ್‍ನಲ್ಲಿ ಆಯಾಯ ನ್ಯಾಯಾಲಯಗಳಲ್ಲಿ ರಾಜಿ ಮಾಡಿಕೊಳ್ಳಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಅವರು ತಿಳಿಸಿದ್ದಾರೆ.
ವ್ಯಾಜ್ಯ ಪೂರ್ವ ಪ್ರಕರಣಗಳು:-ಚೆಕ್ ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೈನ್‍ಟೆನ್‍ನ್ಸ್ ಪ್ರಕರಣಗಳು, ಇತರ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು).
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು:-ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು. ಕಂದಾಯ ಪ್ರಕರಣಗಳು(ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ) ಹಾಗೂ ಸಿವಿಲ್ ಪ್ರಕರಣಗಳು (ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆಗಳು.
ಹೆಚ್ಚಿನ ಮಾಹಿತಿಗೆ ನ್ಯಾಯ ಸಂಯೋಗ, ಕಾನೂನು ನೆರವು ಘಟಕ (ಬಹುವಿಧ ಸೇವೆಗಳು –ಒಂದೇ ಸೂರಿನ ಅಡಿಯಲ್ಲಿ) ನ್ಯಾಯ ದೇಗುಲ, ಮೊದಲನೆ ಮಹಡಿ, ಎಚ್.ಸಿದ್ಧಯ್ಯ ರಸ್ತೆ, ಬೆಂಗಳೂರು-560027, ದೂ.ಸಂ: 080-22111730. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರ ಸಹಾಯವಾಣಿ ಸಂಖ್ಯೆ : 1800-425-90900 ನ್ನು ಸಂಪರ್ಕಿಸಬಹುದು.