ಕೋವಿಡ್ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನ

05/09/2020

ಮಡಿಕೇರಿ ಸೆ.5 : ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಕೋವಿಡ್-19 ಸಂದರ್ಭದಲ್ಲಿ ಸೇವೆ ಸಲ್ಲಿಸಿದ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಎಂ.ಎನ್.ತಿಮ್ಮಯ್ಯ ಮತ್ತು ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ರತೀಶ್ ಎಚ್.ಎನ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗು ಜಿಲ್ಲಾ ಪ್ರಧಾನ ಆಯುಕ್ತರಾದ ಪಿ.ಎಸ್ ಮಚ್ಚಾಡೋ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್, ದೈಹಿಕ ಅಧೀಕ್ಷಕರಾದ ವೆಂಕಟೇಶ್, ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ರವಿ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಸಂತಿ, ಜಿಲ್ಲಾ ಸಂಘಟಕರಾದ ದಮಯಂತಿ ಇತರರು ಹಾಜರಿದ್ದರು.