ಕೊಡಗಿನಲ್ಲಿ ಕೋವಿಡ್ : ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆ

September 6, 2020

ಮಡಿಕೇರಿ ಸೆ.6 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಕೋವಿಡ್ ನಿಂದಾಗಿ ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.
ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಮಡಿಕೇರಿ ತಾಲ್ಲೂಕು ಎಮ್ಮೆಮಾಡು ಗ್ರಾಮದ ನಿವಾಸಿ 58 ವರ್ಷದ ಮಹಿಳೆ ಕೋವಿಡ್ ನಿಂದ ಮೃತಪಟ್ಟವರಾಗಿದ್ದಾರೆ.
ಜ್ವರ ಮತ್ತು ಉಸಿರಾಟದ ತೊಂದರೆಯಲ್ಲಿದ್ದ ಮಹಿಳೆಯನ್ನು ಆ.24 ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಐ.ಸಿ.ಯು.ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತಾದರೂ ಇಂದು ಬೆಳಗ್ಗಿನ ಜಾವ 1.45 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.