ಎಸ್.ಕೆ.ಎಸ್.ಎಸ್.ಎಫ್. ಜಿಸಿಸಿ ಕೊಡಗು : ಕತಾರ್ ನೂತನ ಸಮಿತಿ ಅಸ್ತಿತ್ವಕ್ಕೆ

07/09/2020

ಮಡಿಕೇರಿ : ಅನಿವಾಸಿ ಕನ್ನಡಿಗರ ಆಶಾಕಿರಣವಾದ ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಸಮಿತಿಯ ಅಧೀನದಲ್ಲಿ ಕತಾರ್ ಕೇಂದ್ರೀಕರಿಸಿ ಕಾರ್ಯನಿರ್ವಹಿಸಲು ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ.
ಆನ್ ಲೈನ್ ನಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ
ಎಸ್.ಕೆ .ಎಸ್ ಎಸ್ ಎಫ್ ಜಿಸಿಸಿ ಕೊಡಗು ಅಧ್ಯಕ್ಷರಾದ ಹುಸೈನ್ ಫೈಝಿ, ಮಾಧ್ಯಮ ವಿಭಾಗದ ಸಂಚಾಲಕರಾದ ಯಾಹ್ಯಾ ಕೊಡ್ಲಿಪೇಟೆ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಜಿಸಿಸಿ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಗಫೂರ್ ವಿರಾಜಪೇಟೆ ಸಮಿತಿ ರಚನೆಯ ಮೇಲುಸ್ತುವಾರಿ ವಹಿಸಿದ್ದರು. ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಅಧ್ಯಕ್ಷರ ಅನುಮೋದನೆಯೊಂದಿಗೆ ನೂತನ ಸಮಿತಿ ಘೋಷಣೆ ಮಾಡಲಾಯಿತು.

ಎಸ್.ಕೆ .ಎಸ್.ಎಸ್ ಎಫ್-ಕತಾರ್ ಕೊಡಗು ನೂತನ ಸಮಿತಿಯ ಅಧ್ಯಕ್ಷರಾಗಿ ಹಮೀದ್ ಕೆ.ಎ ಕುಶಾಲನಗರ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲಿ ಸಿ ಲತೀಫ್ , ಕೋಶಾಧಿಕಾರಿಯಾಗಿ ಸಿದ್ದೀಕ್ ಮಡಿಕೇರಿ , ಉಪಾಧ್ಯಕ್ಷರಾಗಿ ಅಶ್ರಫ್ ಅಝ್ಹರಿ, ಸಹ ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಟಿ.ಎ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಾದಿಕ್ ಕೆ.ಟಿ ಆಯ್ಕೆಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಜಿಸಿಸಿ ಕೊಡಗು ಮಾಧ್ಯಮ ವಿಭಾಗದ ಅಧ್ಯಕ್ಷರಾದ ಶಫೀಕ್ ನೆಲ್ಲಿಯಹುದಿಕೇರಿ ಹಾಗೂ ಜಿಸಿಸಿಯ ಹಲವು ನಾಯಕರುಗಳು ಭಾಗವಹಿಸಿದ್ದರು.