ಗುಣಮುಖರಾದವರಿಗೆ ಮತ್ತೆ ಸೋಂಕು

07/09/2020

ಬೆಂಗಳೂರು ಸೆ.7 ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢಪಟ್ಟಿದೆ.
ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಯೊಬ್ಬರಿಗೆ ಮತ್ತೆ ಕೋರೊನಾ ಸೋಂಕು ಕಂಡುಬಂದಿದೆ ಎಂದು ನಗರದ ಪೋರ್ಟಿಸ್ ಆಸ್ಪತ್ರೆ ತಿಳಿಸಿದೆ.
ಜುಲೈನಲ್ಲಿ ಆ ಮಹಿಳೆಗೆ ಪಾಸಿಟಿವ್ ಕಂಡುಬಂದಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಒಂದು ತಿಂಗಳಲ್ಲಿ ಲಘು ಲಕ್ಷಣಗಳು ಕಂಡುಬಂದಿದ್ದು, ಮತ್ತೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.