ಬಿಜೆಪಿಗೆ ತಲೆ ನೋವಾದ ರಾಗಿಣಿ

07/09/2020

ಬೆಂಗಳೂರು ಸೆ.7 : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಬಿಜೆಪಿಯ ಸದಸ್ಯರಲ್ಲ, 2019ರ ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಸ್ವಯಂ ಪ್ರೇರಣೆಯಿಂದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ರಾಜ್ಯ ಬಿಜೆಪಿ ಭಾನುವಾರ ಹೇಳಿದೆ.
ರಾಗಿಣಿ ದ್ವಿವೇದಿ ಬಂಧನಕ್ಕೊಳಗಾದ ಬೆನ್ನಲ್ಲೇ ನಟಿಯಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿ, ಯಾವುದೇ ರೀತಿಯ ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧವಾಗಿ ಇರುವುದಾಗಿ ಹೇಳಿಕೊಂಡಿದೆ.
2019ರ ಉಪ ಚುನಾವಣೆ ಸಂದರ್ಭದಲ್ಲಿ ನೂರಾರು ಸೆಲೆಬ್ರಿಟಿಗಳು ಪಕ್ಷದ ಪ್ರಚಾರಾಂದೋಲನದಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಿದ್ದರು. ಅವರಲ್ಲಿ ರಾಗಿಣಿ ದ್ವಿವೇದಿ ಕೂಡಾ ಒಬ್ಬರಾಗಿದ್ದರು ಎಂದು ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.