ಮೆಟ್ರೋ ರೈಲು ಸಂಚಾರ ಆರಂಭ

07/09/2020

ಬೆಂಗಳೂರು ಸೆ.7 : ಕೊರೋನಾ ಭೀತಿ ನಡುವಲ್ಲೇ ನಮ್ಮ ಮೆಟ್ರೋ ರೈಲು ಸೋಮವಾರದಿಂದ ಸಂಚಾರ ಆರಂಭಿಸಲಿದ್ದು, ಈಗಾಗಲೇ ಪೂರ್ವ ಸಿದ್ಥತೆಗಳನ್ನು ಕೈಗೊಳ್ಳಲಾಗಿದೆ.
ಮಾ.22 ರಂದು ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಿದ ನಂತರ 5 ತಿಂಗಳ ಬಳಿಕ ಸೋಮವಾರ ಸಂಚಾರ ಆರಂಬಿಸಲಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಕೇವಲ ಒಂದು ಮಾರ್ಗದಲ್ಲಿ ಮಾತ್ರ ಬೆಳಿಗ್ಗೆ 8 ಗಂಟೆಗೆ ಬೈಯ್ಯಪ್ಪನ ಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ-ಬೈಯ್ಯಪ್ಪನಹಳ್ಳಿ ನಡುವೆ ರೈಲು ಸಂಚಾರ ಪ್ರಾರಂಭವಾಗಲಿದೆ. ಬೆಳಿಗ್ಗೆ 8ರಿಂದ 11ರವರೆಗೆ ಮತ್ತು ಸಂಜೆ 4.30ರಿಂದ 7.30ರವರೆಗೆ ತಲಾ 5 ನಿಮಿಷಗಳ ಅಂತರದಲ್ಲಿ ರೈಲುಗಳು ಕಾರ್ಯನಿರ್ವಹಿಸಲಿವೆ.
ಸೆ.7ರಿಂದ 10ರವರೆಗೆ ನೇರಳೆ ಮಾರ್ಗದಲ್ಲಿ ಮಾತ್ರ ಮೆಟ್ರೋ ರೈಲು ಸಂಚರಿಸಲಿದ್ದು ಸೆ.9 ಮತ್ತು 10ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ. ಬಳಿಕ ಎರಡೂ ಮಾರ್ಗದಲ್ಲಿ ಸಂಚಾರ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ.