ಮಡಿಕೇರಿಯಲ್ಲಿ ಸ್ಕ್ವಾ. ಲೀ. ಅಜ್ಜಮಾಡ ದೇವಯ್ಯ ಪ್ರತಿಮೆ ಅನಾವರಣ

07/09/2020

ಮಡಿಕೇರಿ ಸೆ. 7 : ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಸಮೀಪ ವೀರ ಸೇನಾನಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಯನ್ನು ಇಂದು ಅನಾವರಣಗೊಳಿಸಲಾಯಿತು.
ನಿವೃತ್ತ ಏರ್ ಮಾರ್ಷಲ್ ಕೊಡಂದೇರ ಸಿ.ಕಾರ್ಯಪ್ಪ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.
ಮಾಜಿ ಸೇನಾಧಿಕಾರಿಗಳು, ಯೋಧರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಈ ಸಂದರ್ಭ ಹಾಜರಿದ್ದರು.