ಸೆ.14 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

07/09/2020

ಮಡಿಕೇರಿ ಸೆ. 7 : ವಸತಿ ಹಾಗೂ ಜಿಲ್ಲಾ ಉಸ್ತ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಸೆ. 14 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಸೆಪ್ಟೆಂಬರ್, 14 ರಂದು ಬೆಳಗ್ಗೆ 10.15 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್‍ಫೋನ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗ್ಗೆ 10.30 ಗಂಟೆಗೆ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಬಿಳಿಗೇರಿ, ಕೆ.ನಿಡುಗಣೆ ಹಾಗೂ ಗಾಳಿಬೀಡು ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳ ನಿರ್ಮಾಣದ ಕಾಮಗಾರಿಗಳ ಸ್ಥಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.