ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ

07/09/2020

ಮಡಿಕೇರಿ ಸೆ. 7 : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭ ಶಾಲೆಯ ಪ್ರಾಂಶುಪಾಲರಾದ ಸರಸ್ವತಿ  ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಶಿಕ್ಷಕರಿಗೆ ಕರೆ ನೀಡಿದರು.
ಶಿಕ್ಷಕರಾದ ಪ್ರಮೀಳ ಜೀವನ್, ಕೆ.ಎನ್. ಭರತ್, ಪ್ರತಿಮಾ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಬೋಧಕೇತರ ವರ್ಗದವರು ಹಾಜರಿದ್ದರು.