ಎಚ್‍ಎಸ್‍ಟಿಡಿವಿ ಹಾರಾಟ ಪರೀಕ್ಷೆ ಯಶಸ್ವಿ
08/09/2020

ನವದೆಹಲಿ ಸೆ.8 : ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು ಎಂದು ಗುರುತಿಸಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್‍ಸ್ಟ್ರೇಟರ್ ವೆಹಿಕಲ್ (ಎಚ್‍ಎಸ್‍ಟಿಡಿವಿ) ಹಾರಾಟ ಪರೀಕ್ಷೆ ಯಶಸ್ವಿಯಾಗಿದೆ.
ದೇಶೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‍ಸ್ಟ್ರೇಟರ್ ವೆಹಿಕಲ್ (ಎಚ್‍ಎಸ್‍ಟಿಡಿವಿ) ಯನ್ನು ಯಶಸ್ವಿಯಾಗಿ ಹಾರಾಟ ಪರೀಕ್ಷಿಸಿದ್ದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‍ಡಿಒ) ಯನ್ನು ಅಭಿನಂದಿಸಿದ್ದಾರೆ.
ಈ ತಂತ್ರಜ್ಞಾನವು ಸ್ವಾವಲಂಬಿ ಭಾರತದ ಕುರಿತು ಪ್ರಧಾನ ಮಂತ್ರಿಯವರ ದೃಷ್ಟಿಯನ್ನು ಸಾಕಾರಗೊಳಿಸುವ ಹೆಗ್ಗುರುತಿನ ಸಾಧನೆಯಾಗಿದೆ ಎಂದು ಅವರು ಹೇಳಿದ್ದಾರೆ.
