ಎಸ್‍ಪಿಬಿ ಗೆ ಕೊರೋನಾ ನೆಗೆಟಿವ್

08/09/2020

ಚೆನ್ನೈ ಸೆ.7 : ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್.ಪಿ.ಚರಣ್ ಹೇಳಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಡಾ. ಎಸ್ ಪಿ ಬಿ ಅವರಿಗೆ ಕಳೆದ ಕೆಲವು ದಿನಗಳಿಂದ ವಿದೇಶಿ ವೈದ್ಯರಿಂದ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.
ಈ ಕ್ರಮವಾಗಿ ಅವರಿಗೆ ಹೊಸದಾಗಿ ನಡೆಸಲಾದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಆದರೆ ತಂದೆಯವರ ಶ್ವಾಸಕೋಶದಲ್ಲಿ ಇನ್ನೂ ಸ್ವಲ್ಪ ಸೋಂಕಿದ್ದು, ಇನ್ನೊಂದು ವಾರದಲ್ಲಿ ಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.