ಕೊಡಗಿನಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆ
08/09/2020

ಮಡಿಕೇರಿ ಸೆ.8 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಗೆ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ನಿವಾಸಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ 70 ವರ್ಷದ ಪುರುಷರೊಬ್ಬರಿಗೆ ಜ್ವರ ಕಾಣಿಸಿಕೊಂಡು, ಸೆ.2 ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು.
ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಯ ಐ.ಸಿ.ಯು.ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.