ನಟಿ ಸಂಜನಾ 5 ದಿನ ಸಿಸಿಬಿ ವಶಕ್ಕೆ

09/09/2020

ಬೆಂಗಳೂರು ಸೆ.9 : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ.
ಪ್ರಕರಣದಲ್ಲಿ ಎ14 ಆರೋಪಿಯಾಗಿರುವ ಸಂಜನಾ ಅವರನ್ನು ಮಂಗಳವಾರ ಬೆಳಗ್ಗೆ ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು, ಸುಮಾರು ಮೂರು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. ಬಳಿಕ ನಟಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಆರೋಪಿಯ ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಟಿಯನ್ನು ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ.
ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಪೃಥ್ವಿ ಹಾಗೂ ಸಂಜನಾ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‍ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಪುರಾವೆಗಳು ದೊರೆತಿವೆ.