ಕಾಡಾನೆಗಳ ಸೆರೆಗೆ ಸರ್ಕಾರದ ಅನುಮತಿ

09/09/2020

ಮಡಿಕೇರಿ : ವಿರಾಜಪೇಟೆ ತಾಲ್ಲೂಕಿನಲ್ಲಿ 2 ಹಾಗೂ ಮಡಿಕೇರಿ ವಿಭಾಗದಲ್ಲಿ 2 ಕಾಡಾನೆಗಳು ಸೇರಿ ಒಟ್ಟು 4 ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಅನುಮತಿ ನೀಡಿದೆ ಎಂದು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಲಾಲ್ ತಿಳಿಸಿದ್ದಾರೆ.

ಕೊಡಗಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದು, ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ.

ಉಪಟಳ ನೀಡುವ ಆನೆಗಳನ್ನು ಸೆರೆ ಹಿಡಿದು ಸ್ಥಳಾಂತರಗೊಳಿಸಲು ಅರಣ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು ಎಂದು ಹೇಳಿದ್ದಾರೆ.