ಕೊಡಗು ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ

09/09/2020

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ತಲಕಾವೇರಿ, ಭಾಗಮಂಡಲ ಹಾಗೂ ನಾಪೋಕ್ಲು ಭಾಗದಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಮಡಿಕೇರಿ ನಗರದಲ್ಲೂ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಚರಂಡಿಗಳು ತುಂಬಿ ಹರಿದಿವೆ. ಮುಂದಿನ 24 ಗಂಟೆಗಳಲ್ಲಿ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆಗಸ್ಟ್ ತಿಂಗಳಿನಲ್ಲಿ ಸುರಿದ ಅತಿಮಳೆಯಿಂದ ಸಂಕಷ್ಟ ಎದುರಿಸಿದ ಜಿಲ್ಲೆಯ ಜನ ಮತ್ತೆ ಮಳೆ ಆರ್ಭಟದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.