ಆತ್ಮನಿರ್ಭರಕ್ಕೆ 10,339 ಕೋಟಿ ಬಿಡುಗಡೆ

September 10, 2020

ನವದೆಹಲಿ ಸೆ.9 : ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲಿ ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಯಡಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 10,339 ಕೋಟಿ ರೂ. ಬಿಡುಗಡೆಗೊಳಿಸಿದೆ.
ಜೊತೆಗೆ, 2,475 ಕೋಟಿ ರೂ.ಗಳ ಇನ್ನೊಂದು ಮೊತ್ತವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವಾಲಯ ಬುಧವಾರ ತಿಳಿಸಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಯೋಜನೆಯಡಿ ಪಾವತಿ ಪ್ರಕ್ರಿಯೆಯನ್ನು ಸರಳೀಕರಿಸಿದೆ ಮತ್ತು ಮೈಲಿಗಲ್ಲು ಸಾಧನೆಯ ಆಧಾರದ ಮೇಲೆ ಗುತ್ತಿಗೆದಾರರ ಪಾವತಿಗಳನ್ನು ಪ್ರತಿ ತಿಂಗಳು ಮಾಡಲಾಗುತ್ತಿದೆ.
ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಇದು ಅತ್ಯಂತ ಪ್ರಯೋಜನಕಾರಿ ಎಂದು ಸಾಬೀತಾಗಿದೆ.