ಸೆ.15 ಕ್ಕೆ ವಿಷ್ಣು ಸ್ಮಾರಕಕ್ಕೆ ಭೂಮಿಪೂಜೆ

10/09/2020

ಬೆಂಗಳೂರು ಸೆ.10 : ಇದೇ ಸೆ.15ನೇ ತಾರೀಖು ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ವಿಷ್ಣುವರ್ಧನ್ ಪತ್ನಿ, ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.
ಈ ಸಂಬಂಧ ಹಿರಿಯ ನಟಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಡಿ ಭೂಮಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಟಿ “ಹನ್ನೊಂದನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಎಂ ಯಡಿಯೂರಪ್ಪ ಅವರನ್ನು ಆಹ್ವಾನಿಸಲು ಆಗಮಿಸಿದ್ದೇನೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ಗುದ್ದಲಿ ಪೂಜೆ ಇದೇ ತಿಂಗಳ 15ರಂದು ನಡೆಯಲಿದೆ. ಇದಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಲು, ಹಾಗೂ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ನಿಡಲು ಆಗಮಿಸಿದ್ದೇನೆ” ಎಂದರು.