ಶಿಕ್ಷಕಿ ರೇವತಿ ರಮೇಶ್ ಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

10/09/2020

ಮಡಿಕೇರಿ ಸೆ.10 : ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೇವತಿ ರಮೇಶ್ ಅವರು ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 11 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ತಿಳಿಸಿದ್ದಾರೆ.