ಐ.ಎಂ ದಿಲನ್‍ಗೆ ಪಿ.ಎಚ್.ಡಿ ಪದವಿ

September 10, 2020

ಮಡಿಕೇರಿ ಸೆ.10 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ದಿಲನ್ ಐ.ಎಂ ಅವರು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಹಾಗೂ ಬೆಂಗಳೂರು ಸಂಸ್ಕøತ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಪದ್ಮಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ವಿರಾಜಪೇಟೆ ತಾಲ್ಲೂಕು: ಸಾಂಸ್ಕೃತಿಕ ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಪಿಹೆಚ್‍ಡಿ ಪದವಿಯನ್ನು ನೀಡಿದೆ. ಇವರು ಪ್ರಸ್ತುತ ವಿರಾಜಪೇಟೆ ಬಾಳುಗೋಡುವಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕನ್ನಡ ಭಾμÁ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.