ಕೋರಂಗಾಲದಲ್ಲಿ ಅಪರಿಚಿತ ಮೃತ ದೇಹ ಪತ್ತೆ

September 10, 2020

ಮಡಿಕೇರಿ ಸೆ.10 : ಭಾಗಮಂಡಲದ ಕೋರಂಗಾಲ ಗ್ರಾಮದಲ್ಲಿ ಕಾವೇರಿ ನದಿಯಲ್ಲಿ ಅಪರಿಚಿತ ಪುರುಷನ ಮೃತ ದೇಹವೊಂದು ಪತ್ತೆಯಾಗಿದೆ. ಒಂದು ವಾರದ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದೆಂದು ಭಾಗಮಂಡಲ ಠಾಣಾಧಿಕಾರಿ‌ ತಿಳಿಸಿದ್ದಾರೆ.ಪೊಲೀಸರು ಹಾಗೂ ಗ್ರಾಮಸ್ಥರ ಸಹಕಾರದಿಂದ ಮೃತದೇಹವನ್ನು ದಡಕ್ಕೆ ತಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಸುಮಾರು 45 ವರ್ಷದ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಠಾಣೆಗೆ ತಿಳಿಸುವಂತೆ ಅವರು ಮನವಿ ಮಾಡಿದ್ದಾರೆ.

error: Content is protected !!