ಕೊಡಗಿನಲ್ಲಿ ಒಂದು ದಿನಕ್ಕೆ 450 ಕೋವಿಡ್ ಪರೀಕ್ಷೆ

10/09/2020

ಮಡಿಕೇರಿ : ಜಿಲ್ಲೆಯಲ್ಲಿ ಒಂದು ದಿನಕ್ಕೆ 450 ಮಂದಿಯಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ಹಲವಾರು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಶೇ.11 ರಷ್ಟಿದೆ. ಶೇ. 1.2 ರಷ್ಟು ಮರಣ ಪ್ರಮಾಣವಿದೆ ಎಂದು ನೀಡಿದರು. ಮನೆ ಮನೆಗೆ ತೆರಳಿ ಕೋವಿಡ್ ಸಂಬಂಧ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ ಎಂದರು.