ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ 56 ಹಾಸಿಗೆಯ ಐಸಿಯು

10/09/2020

ಮಡಿಕೇರಿ ಸೆ.10 : ಕೊಡಗಿನ ಕೋವಿಡ್ ಆಸ್ಪತ್ರೆಯಲ್ಲಿ 56 ಹಾಸಿಗೆಯ ಐಸಿಯುವನ್ನು ಚಿಕಿತ್ಸೆಗಾಗಿ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಗಳಿಂದಲೂ ಚಿಕಿತ್ಸೆಗಾಗಿ ಸೋಂಕಿತರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಆದರೆ ಜಿಲ್ಲೆಯ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಜಿಲ್ಲೆಯನ್ನು ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.