ಕೊಡಗು ಜಿಲ್ಲೆಯ 3 ತಾಲ್ಲೂಕುಗಳು ಪ್ರವಾಹ ಪೀಡಿತ

12/09/2020

ಮಡಿಕೇರಿ ಸೆ.11 : ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅತಿವೃಷ್ಠಿ/ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿ ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ ಮತ್ತು ನೋಂ ಮು) ಸರ್ಕಾರದ ಜಂಟಿ ಕಾರ್ಯದರ್ಶಿ ಕೆ.ಉಮಾಪತಿ ಅವರು ಆದೇಶಿಸಿದ್ದಾರೆ.
ಈ ಪೈಕಿ ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲೂಕುಗಳನ್ನು ಅತಿವೃಷ್ಠಿ/ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.