ಅರಣ್ಯ ಸಿಬ್ಬಂದಿಗೆ 30 ಲಕ್ಷ ಪರಿಹಾರ

September 12, 2020

ಬೆಂಗಳೂರು ಸೆ.12 : ಅರಣ್ಯ ಇಲಾಖೆಯಲ್ಲಿ ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದಿದಲ್ಲಿ ಅವರಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ 20 ರಿಂದ 30 ಲಕ್ಷ ರೂ. ಗಳಿಗೆ ಏರಿಕೆ ಮಾಡಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ಅಲ್ಲದೆ ಹುತಾತ್ಮರ ಕುಟುಂಬಗಳಿಗೆ ನೆರವಾಗಲು ಹುತಾತ್ಮರ ದಿನಾಚರಣೆ ಸಮಿತಿಯನ್ನು ರಚಿಸಿ ನಿಧಿ ಸಂಗ್ರಹಿಸಲಾಗಿದ್ದು, ಈವರೆಗೆ ಕ್ರೋಢೀಕರಣವಾಗಿರುವ ಒಟ್ಟು 20,64,842 ರೂ. ಮೊತ್ತವನ್ನು ಹುತಾತ್ಮರ ಅವಲಂಬಿತರ ಏಳಿಗೆಗಾಗಿ ಬಳಸಲಾಗುವುದು ಎಂದರು.
ಅರಣ್ಯ ಭವನದಲ್ಲಿಂದು ಏರ್ಪಡಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2020 ಹಾಗೂ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಅವರು, ಅರಣ್ಯ ಉಳಿಸಿ ಬೆಳೆಸುವುದು, ಅರಣ್ಯ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಅರಣ್ಯ ಸಂರಕ್ಷಣೆ ರಾಷ್ಟ್ರದ ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದರು.

error: Content is protected !!