ಪದಕ ವಿಜೇತ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಮಡಿಕೇರಿ ಸೆ.12 : ರಾಷ್ಟ್ರಪತಿ ಪದಕಕ್ಕೆ ಭಾಜನರಾದ ಸೋಮವಾರಪೇಟೆ ತಾಲೂಕು ಪೊಲೀಸ್ ಉಪ ಅಧೀಕ್ಷಕ ಹೆಚ್.ಎಂ.ಶೈಲೇಂದ್ರ ಹಾಗೂ ಮಡಿಕೇರಿ ಗ್ರಮಾಂತರ ಠಾಣಾ ಪೊಲೀಸ್ ವೃತ್ತ ನಿರೀಕ್ಷಕ ಸಿ.ಎನ್.ದಿವಾಕರ್ ಅವರನ್ನು ವಿವಿಧ ಸಂಸ್ಥೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಹರಿಶ್ಚಂದ್ರಪುರದಲ್ಲಿರುವ ವರ್ತಕರ ಸಂಘದ ನೂತನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಗೋಣಿಕೊಪ್ಪಲಿನ ಕೈಗಾರಿಕಾ ಸಂಸ್ಥೆ ಸ್ಥಾನಿಯ ಸಮಿತಿ ಹಾಗೂ ದಿ ಮರ್ಚೆಂಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಹಯೋಗದಲ್ಲಿ ಸಂಸ್ಥೆಯ ಪ್ರಮುಖರು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕುಶಾಲನಗದ ಡಿವೈಎಸ್‍ಪಿ ಹೆಚ್.ಎಂ. ಶೈಲೇಂದ್ರ, ವಿರಾಜಪೇಟೆ, ಗೋಣಿಕೊಪ್ಪಲಿನಲ್ಲಿ ಸೇವೆ ಸಲ್ಲಿಸಿದ ದಿನಗಳು ಅವಿಸ್ಮರಣೀಯ ಎಂದರು.
ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸ್ ವೃತ್ತ ನಿರೀಕ್ಷಕ ಸಿ.ಎನ್. ದಿವಾಕರ್ ಮಾತನಾಡಿ, ವೀರರ ಶೂರರ ನಾಡು ಕೊಡಗಿನಲ್ಲಿ ಕೆಲಸಮಾಡುವುದು ಅದೃಷ್ಟ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ಪೊಲೀಸ್ ಅಧೀಕ್ಷಕ ಜಯಕುಮಾರ್, ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ ರಾಮಿರೆಡ್ಡಿ, ಸಂಘದ ಅಧ್ಯಕ್ಷ ಕಡೇಮಾಡ ಸುನಿಲ್ ಮಾದಪ್ಪ, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಕಿರಿಯಮಾಡ ಅರಣ್ ಪೂಣಚ್ಚ, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಎಂ.ಪಿ. ಕೇಶವ್ ಕಾಮತ್, ಗೌರವ ಕಾರ್ಯದರ್ಶಿ ಪೊನ್ನಿಮಾಡ ಸುರೇಶ್, ಹಾಗೂ ಪ್ರಮುಖರಾದ ಸುಮಿ ಸುಬ್ಬಯ್ಯ, ಬಿ.ಎನ್. ಪ್ರಕಾಶ್, ಪ್ರಭಾಕರ್ ನೆಲ್ಲಿತ್ತಾಯ, ವರ್ತಕರ ಸಂಘದ ಪದಾಧಿಕಾರಿಗಳಾದ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ನಾಮೇರ ದೇವಯ್ಯ, ಅನಿತಾ, ಪ್ರಧಾನ ಕಾರ್ಯದರ್ಶಿ ಟಿ.ಪಿ. ಕಾಶಿ, ಮನೋಹರ್, ಎ.ಜೆ. ಬಾಬು, ಕಿರಣ್, ಪಿ.ಕೆ. ವಿಜಯನ್, ಹೆಚ್.ಎನ್. ಮುರುಘ, ಆಲೀರ ಕೆ. ಉಮ್ಮರ್ ಉಪಸ್ಥಿತರಿದ್ದರು.

